ಮಹಾರಾಷ್ಟ್ರ ,ಏ 23 (DaijiworldNews/MS): ಪಾಲ್ಘರ್ ಜಿಲ್ಲೆಯ ವಸಾಯಿ ವಿರಾರ್ನಲ್ಲಿರುವ ವಿಜಯ ವಲ್ಲಭ್ ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಭೀಕ ಅಗ್ನಿ ಅವಘಡ ಅಗ್ನಿ ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದು ಹಲವಾರು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದ(ಐಸಿಯು) ಎಸಿ ಘಟಕದಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ 16 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಹೇಳಲಾಗುತ್ತಿದ್ದು ಮೃತದೇಹಗಳು ಸುಟ್ಟು ಕರಕಲಾಗಿರುವ ಕಾರಣ ಮೃತದೇಹಗಳನ್ನು ಗುರುತಿಸುವ ಸ್ಥಿತಿಯಲಿಲ್ಲ.
ವಸಾಯಿ ವಿರಾರ್ ಪಾಲಿಕೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು , ಚಿಕಿತ್ಸೆ ಪಡೆಯುತ್ತಿದ್ದ ಇತರ ಕೊವೀಡ್ ಸೋಂಕಿತರನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.