ಮುಂಬೈ,ಏ.23 (DaijiworldNews/HR): ಪಾಲ್ಘರ್ ಜಿಲ್ಲೆಯ ವಸಾಯಿ ವಿರಾರ್ನಲ್ಲಿರುವ ವಿಜಯ ವಲ್ಲಭ್ ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಅವಘಡ ಅಗ್ನಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಶುಕ್ರವಾರ ತನಿಖೆಗೆ ಆದೇಶಿಸಿದ್ದಾರೆ.

ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, "ವಿಜಯ ವಲ್ಲಭ್ ಕೊರೊನಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ತನಿಖೆಗೆ ಆದೇಶಿಸಿದ್ದು, ಮೃತಪಟ್ಟ ರೋಗಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮತ್ತು ಹಾಗೂ ತೀವ್ರವಾಗಿ ಗಾಯಗೊಂಡ ರೋಗಿಗಳಿಗೆ ತಲಾ 1 ಲಕ್ಷ ರೂ.ಗಳನ್ನು ಉದ್ಧವ್ ಠಾಕ್ರೆ ಘೋಷಿಸಿದ್ದಾರೆ" ಎಂದು ತಿಳಿದಿದೆ.
ಇನ್ನು ಶುಕ್ರವಾರ ಬೆಳಗಿನ ಜಾವ ವಿಜಯ ವಲ್ಲಭ್ ಕೊರೊನಾ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿ ಸಜೀವ ದಹನವಾಗಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದು, ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗದಿ ಎಂದು ಹೇಳಿದ್ದಾರೆ.