ಬೆಂಗಳೂರು, ಏ. 27 (DaijiworldNews/SM): ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಇಂದು 31,830 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,00,775ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಮಂಗಳವಾರ ಒಂದೇ ದಿನ 180 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಝ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 14,807ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ಬೆಂಗಳೂರಿನಲ್ಲಿ ಇಂದು 17,550 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 6,87,751ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 97 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಇಂದು 10,793 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,84,050ಕ್ಕೆ ಏರಿಕೆಯಾಗಿದೆ.