ಬೆಳಗಾವಿ, ಮೇ 2 (DaijiworldNews/MS): ಕರ್ನಾಟಕದ ಮೂರು ಕ್ಷೇತ್ರ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು- ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.

ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ದಿ. ಸುರೇಶ್ ಅಂಗಡಿಯವರ ಪತ್ನಿ ಮಂಗಳ ಅಂಗಡಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಸ್ ಜಾರಕಿಹೊಳಿಯ ನಡುವೆ ಚುಣಾವಣೆ ಮತ ಎಣಿಕೆಯಲ್ಲಿ ಮದ್ಯೆ ನೇರನೇರಾ ಪೈಟ್ ಆರಂಭವಾಗಿದೆ. ಬೆಳಗಾವಿ ಲೋಕಸಭೆ ಉಪಚುನಾವಣೆ ನಡೆದ ಮೊದಲ ಸುತ್ತಿನಲ್ಲಿ ಮಂಗಳಾ ಅಂಗಡಿ ಅವರಿಗೆ 84 ಮತಗಳ ಅಂತರದಲ್ಲಿ ಮುನ್ನಡೆಯಾಗಿತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ ಎಂಟನೇ ಸುತ್ತಿನಲ್ಲಿ ಸತೀಸ್ ಜಾರಕಿಹೊಳಿ 21850 ಮತಗಳನ್ನು ಗಳಿಸಿ ಮುನ್ನಡೆ ಸಾಧಿಸಿದ್ದಾರೆ.
ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರೆ, ಬಿಜೆಪಿ ಹಿನ್ನಡೆ ಸಾಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.