ನವದೆಹಲಿ, ಮೇ 02 (DaijiworldNews/MB) : ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಗೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆದರೆ ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ತಮಿಳುನಾಡಿದಲ್ಲಿ ಡಿಎಂಕೆ ಮತ್ತು ಕೇರಳದಲ್ಲಿ ಎಲ್ಡಿಎಫ್ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆ ಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದೀದಿ, ಪಿಣರಾಯಿ ವಿಜಯನ್ ಹಾಗೂ ಸ್ಟಾಲಿನ್ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ''ಮಮತಾ ದೀದಿ ಅವರ ಪಕ್ಷ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕೆ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಅಧಿಕಾರಾವಧಿಗೆ ನನ್ನ ಶುಭಾಶಯಗಳು'' ಎಂದು ಹೇಳಿದ್ದಾರೆ. ಹಾಗೆಯೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ತಮಿಳುನಾಡಿನ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರರಾಯಿ ವಿಜಯನ್ ಅವರಿಗೂ ಅಭಿನಂದನೆ ಸಲ್ಲಿಸಿರುವ ರಾಜನಾಥ್ ಸಿಂಗ್, ''ಪಿಣರಾಯಿ ನೇತೃತ್ವದ ಎಲ್ಡಿಎಫ್ ಸರ್ಕಾರ ಮತ್ತೆ ಅಧಿಕಾರ ಪಡೆದಿರುವುದಕ್ಕೆ ಅಭಿನಂದನೆಗಳು ಮುಂದಿನ ಅಧಿಕಾರಾವಧಿಗೆ ನನ್ನ ಶುಭಾಶಯಗಳು'' ಎಂದು ತಿಳಿಸಿದ್ದಾರೆ.