ನವದೆಹಲಿ, ಮೇ.08 (DaijiworldNews/PY): ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಸುಮಾರು 4,01,078 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮುಖೇನ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,18,92,676ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,187 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದು, ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 2,38,270ಕ್ಕೆ ಏರಿಕೆಯಾಗಿದೆ ಎಂದಿ ತಿಳಿಸಿದೆ.
ದೇಶದಲ್ಲಿ ಸದ್ಯ 37,23,446 ಕೊರೊನಾ ಸಕ್ರಿಯ ಪ್ರಕರಣಗಳಿವೆ ಸೋಂಕಿನಿಂದ 1,79,30,960 ಮಂದಿ ಗುಣಮುಖರಗಿದ್ದು, 3,18,609 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದೆ.