ನವದೆಹಲಿ, ಮೇ.18 (DaijiworldNews/HR): ಭಾರತದಲ್ಲಿ ಕೊರೊನಾ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿಯನ್ನು ಕೇಂದ್ರ ಸರ್ಕಾರದ ನಡೆಯನ್ನು ವೈದ್ಯಕೀಯ ತಜ್ಞರು ಸ್ವಾಗತಿಸಿದ್ದಾರೆ ಎಂದು ತಿಳಿದು ಬಂದಿದೆ.

ಭಾರತದಲ್ಲಿ ಪ್ರಸ್ತುತ ಬಳಕೆಯಲ್ಲಿದ್ದ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟಿದ್ದು, ಕೇಂದ್ರ ಸರ್ಕಾರದ ಈ ನಡೆಯನ್ನು ದೇಶದ ವೈದ್ಯಕೀಯ ತಜ್ಞರು ಸ್ವಾಗತಿಸಿ ಇದು ಅನಿವಾರ್ಯದ ನಡೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ದೆಹಲಿಯ ಗಂಗಾರಾಮ್ ಆಸ್ಪತ್ರೆಯ ಮುಖ್ಯಸ್ಥ ಡಾ.ಡಿಎಸ್ ರಾಣಾ, ಕೊರೊನಾ ಸೋಂಕಿತರ ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಪ್ಲಾಸ್ಮಾ ಚಿಕಿತ್ಸೆಯು ವಿಫಲವಾಗಿದೆ" ಎಂದರು.
ಇನ್ನು ಭಾರತದಾದ್ಯಂತ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಪ್ಲಾಸ್ಮಾ ಬೇಡಿಕೆಯಲ್ಲಿ ಅಭೂತಪೂರ್ವ ಏರಿಕೆ ಕಂಡುಬಂದಿದ್ದು, ಈ ಪ್ಲಾಸ್ಮಾ ಬಳಕೆಯಿಂದಾಗಿ ಒಳ್ಳೆಯದಕ್ಕಿಂತ ಹೆಚ್ಚಿನ ಹಾನಿ ಸಂಭವಿಸುತ್ತಿದೆ ಎಂದು ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಒಂದು ವರ್ಷದ ಅವಧಿಯಲ್ಲಿ ಈ ಪ್ಲಾಸ್ಮಾ ಚಿಕಿತ್ಸೆ ಮರಣದ ಪ್ರಮಾಣವನ್ನು ತಗ್ಗಿಸುವಲ್ಲಿ ವಿಫಲವಾಗಿದೆ" ಎಂದು ಹೇಳಿದ್ದಾರೆ.
ಈ ಸಂಬಂಧ ಐಸಿಎಂಆರ್ ನ್ಯಾಶನಲ್ ಟಾಸ್ಕ್ ಫೋರ್ಸ್ ಸಭೆ ಸೇರಿ ಚರ್ಚಿಸಿದ್ದು, ಈ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿಯನ್ನು ಕೈಬಿಡುವ ನಿರ್ಧಾರ ಕೈಗೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ.