ನವದೆಹಲಿ, ಮೇ.23 (DaijiworldNews/PY): ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,40,842 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2,65,30,132ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಒಂದೇದಿನ ಸೋಂಕಿಗೆ 4,529 ಮಂದಿ ಬಲಿಯಾಗಿದ್ದು, ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 2,99,266ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 3,55,102 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 2,34,25,467ಕ್ಕೆ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಭಾರತದಲ್ಲಿ ಶನಿವಾರ 21,23,782 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಒಟ್ಟು 32,86,07,937 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕೇಂದ್ರ ಸರ್ಕಾರದ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೆ ಒಟ್ಟು 19,50,04,184 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದೆ.