ನವದೆಹಲಿ, ಜೂ 3(DaijiworldNews/MS): ದೇಶಾದ್ಯಂತ ಕೊರೋನಾ ಸೋಂಕಿನ ಪ್ರಕರಣಗಳ ಇಳಿಕೆಯ ಹಾದಿಯಲ್ಲಿ ಸಾಗುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,34,154 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು , 2,887 ಸಾವುಗಳು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.

ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಪ್ರಕಾರ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,84,41,986ಕ್ಕೆ ಏರಿಕೆಯಾಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 3,37,989ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 2,11,499 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,63,90,584ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 22,10,43,693 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.