ಮುಂಬೈ, ಜೂ.15 (DaijiworldNews/HR): ಮಹಿಳಾ ಸಹಾಯಕ ಇನ್ಸ್ ಪೆಕ್ಟರ್ರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಮೂವರ ವಿರುದ್ಧ ಮುಂಬೈನ ಮೇಘವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಂಧರ್ಭಿಕ ಚಿತ್ರ
ಔರಂಗಾಬಾದ್ ಮೂಲದವನಾದ ಪ್ರಮುಖ ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಮಹಿಳಾ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಗೆ ಪರಿಚಯವಾಗಿದ್ದು, ಮುಂಬೈನ ಪೊವಾಯ್ ಪ್ರದೇಶಕ್ಕೆ ಭೇಟಿಯಾಗಲು ಬಂದಿದ್ದ ಆರೋಪಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.
ಇನ್ನು ಅತ್ಯಾಚಾರವೆಸಗಿದ ದೃಶ್ಯಗಳನ್ನು ಸೆರೆಹಿಡಿದು ಇಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಬ್ಲಾಕ್ ಮೇಲ್ ಮಾಡಿದ್ದಾರೆ.
ಈ ಬಗ್ಗೆ ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ಮೇಘವಾಡಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.