ಶ್ರೀನಗರ, ಜೂ 19 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 24ರಂದು ಜಮ್ಮು-ಕಾಶ್ಮೀರದ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ನವದೆಹಲಿಯಲ್ಲಿ ನಡೆಯಲಿರುವ ದುಂಡು ಮೇಜಿನ ಸಭೆಗೆ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಎಲ್ಲಾ ರಾಜಕೀಯ ಮುಖಂಡರನ್ನು ಆಹ್ವಾನಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಜಮ್ಮು-ಕಾಶ್ಮೀರದಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಗಳ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಅಭಿವೃದ್ದಿ ಕಾಮಗಾರಿಗಳ ಅನುಷ್ಠಾನದ ಸಂದರ್ಭ ಪಾರದರ್ಶಕತೆಗೆ ಕೇಂದ್ರ ಸರ್ಕಾರ ಪ್ರಾಶಸ್ತ್ಯ ನೀಡುತ್ತದೆ. ಕೇಂದ್ರವು ಕಣಿವೆಯ ಎಲ್ಲಾ ಪಕ್ಷಗಳ ಮುಖಂಡರ ಸಭೆಗೆ ವೇದಿಗೆ ಸಿದ್ದಗೊಳಿಸಿದೆ ಎಂದು ತಿಳಿಸಿದ್ದರು ಎಂದು ವರದಿ ಹೇಳಿದೆ.