ಬೆಂಗಳೂರು, ಜೂ. 26(DaijiworldNews/HR): ಕರ್ನಾಟಕದಲ್ಲಿ ಶನಿವಾರ 4,272 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 115 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಸಾಂಧರ್ಭಿಕ ಚಿತ್ರ
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಶನಿವಾರ 4,272 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ 115 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿ ಈವರೆಗೂ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 34,654ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 28,31,026 ಆಗಿದ್ದು, ಇಂದು 6,126 ಮಂದಿ ಸೋಂಕಿನಿಂದ ಗುಣಮುಖರಾಗಿ ಇಲ್ಲಿಯವರೆಗೆ ಒಟ್ಟು 26,91,123 ಸೋಂಕಿತರು ಗುಣಮುಖರಾಗಿದ್ದಾರೆ.
ಇನ್ನು ಸದ್ಯಕ್ಕೆ 105226 ಸಕ್ರಿಯ ಕೊರೊನಾ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.