ಬೆಂಗಳೂರು, ಜು 02 (DaijiworldNews/PY): ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದು, ಚರ್ಚೆ ನಡೆಸಿದರು.

ಬಸವರಾಜ್ ಬೊಮ್ಮಾಯಿ ಅವರು ಜಿಎಸ್ಟಿ ಮಂಡಳಿಯ ಕರ್ನಾಕಟದ ಪ್ರತಿನಿಧಿಯಾಗಿದ್ದು, ಜಿಎಸ್ಟಿ ವಿಚಾರದ ಬಗ್ಗೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿದರು. ಈ ವೇಳೆ ಬೊಮ್ಮಾಯಿ ಅವರಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವಿನ ಬೇಡಿಕೆ ಇರಿಸಿದರು.
ರಾಜ್ಯದ ಪಾಲಿನ ಜಿಎಸ್ಟಿ ಪರಿಹಾರ ಬಾಕಿ 1,800 ಕೋಟಿ ರೂ. ಬಿಡುಗಡೆಗೊಳಿಸುವಂತೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಈ ಸಂದರ್ಭ ನಿರ್ಮಲಾ ಸೀತಾರಾಮನ್ ಅವರು, ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳಿಗೆ ಆರ್ಥಿಕ ನೆರವು ನೀಡುವ ಭರವಸೆಯನ್ನು ನೀಡಿದರು.