ಡೆಹ್ರಾಡೂನ್, ಜು 03 (DaijiworldNews/PY): ಉತ್ತರಾಖಂಡ್ನ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ.

ಶನಿವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಉತ್ತರಾಖಂಡ್ನ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅವರ ಹೆಸರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ.
ಶನಿವಾರ ಡೆಹ್ರಾಡೂನ್ನಲ್ಲಿರುವ ರಾಜ್ಯ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ಇತರ ಬಿಜೆಪಿ ಮುಖಂಡರು ಉತ್ತರಾಖಂಡದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಶಾಸಕಾಂಗ ಸಭೆ ನಡೆಸಿದರು.
ಉತ್ತರಾಖಂಡದಲ್ಲಿ ರಾಜಕೀಯ ಕೋಲಾಹಲ ತೀವ್ರಗೊಂಡಿದ್ದು, ಶುಕ್ರವಾರ ತಿರತ್ ಸಿಂಗ್ ರಾವತ್ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರು.