ನವದೆಹಲಿ, ಜು 04 (DaijiworldNews/PY): ದೇಶದಲ್ಲಿ ಕಳೆದ 24 ಗಂಟೆಯಲ್ಲಿ 43,071 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 3,05,45,433ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 955 ಮಂದಿ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ 4,02,005 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 52,299 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 2,96,58,078 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 4,85,350 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಶನಿವಾರ 18,38,490 ಮಂದಿಯ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು ದೇಶದಲ್ಲಿ ಈವರೆಗೆ 41,82,54,953 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 35,12,21,306 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.