ನವದೆಹಲಿ, ಜು. 4 (DaijiworldNews/HR): "ಈ ಬಾರಿಯ ಭಾರತ ರತ್ನ ಪ್ರಶಸ್ತಿಯನ್ನು ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಜನರ ಸೇವೆಯಲ್ಲಿ ನಿರತರಾಗಿದ್ದ ಎಲ್ಲಾ ವೈದ್ಯರು ಮತ್ತು ದಾದಿಯರಿಗೆ ನೀಡಬೇಕು" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, "ಭಾರತೀಯ ವೈದ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು. ಇದರಲ್ಲಿ ಎಲ್ಲಾ ವೈದ್ಯರು, ದಾದಿಯರು ಒಳಪಡುತ್ತಾರೆ. ಇದು ಜೀವದ ಹಂಗು ತೊರೆದು ಜನರ ಜೀವ ಉಳಿಸಿದ ವೈದ್ಯರಿಗೆ ನೀಡುವ ನಿಜವಾದ ಗೌರವವಾಗಿದೆ" ಎಂದು ತಿಳಿಸಿದ್ದಾರೆ.
ಇನ್ನು "ಕೊರೊನಾದ ಎರಡನೇ ಅಲೆಯ ಸಂದರ್ಭದಲ್ಲಿ 730ಕ್ಕೂ ಹೆಚ್ಚು ವೈದ್ಯರು ಸೋಂಕಿನಿಂದ ಮೃತಪಟ್ಟಿದ್ದಾರೆ" ಎಂದು ಭಾರತೀಯ ವೈದ್ಯಕೀಯ ಸಂಘವು(ಐಎಂಎ) ಹೇಳಿತ್ತು.