ಡೆಹ್ರಾಡೂನ್,ಜು. 4 (DaijiworldNews/HR): ಉತ್ತರಾಖಂಡ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ ಅವರು ಭಾನುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಪುಷ್ಕರ್ ಸಿಂಗ್ ಧಮಿ ಕಾಟಿಮಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದು, ಉತ್ತರಾಖಂಡ ರಾಜ್ಯದ ಕಿರಿಯ ವಯಸ್ಸಿನ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ ಎನ್ನಲಾಗಿದೆ.
ಇನ್ನು ನಾಲ್ಕು ತಿಂಗಳ ಅವಧಿಯಲ್ಲಿ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರಿ ಸ್ವೀಕರಿಸಿರುವ ಪುಷ್ಕರ್ ಸಿಂಗ್ ಧಮಿ, ಉತ್ತರಾಖಂಡ ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಶನಿವಾರ ಆಯ್ಕೆಯಾಗಿದ್ದರು.
ಕಾನೂನು ವಿಷಯದಲ್ಲಿ ಪದವಿ ಪೂರೈಸಿರುವ ಪುಷ್ಕರ್ ಸಿಂಗ್ ಧಮಿ, ಆರ್ಎಸ್ಎಸ್ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ.