ಬೆಂಗಳೂರು, ಜು. 4 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಪ್ರಕರಣ ಇಳಿಕೆಯಾಗುತ್ತಿದ್ದು ಭಾನುವಾರ 1,564 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 28,53,643ಕ್ಕೆ ಏರಿಕೆಯಾಗಿದೆ.

ಸಾಂಧರ್ಭಿಕ ಚಿತ್ರ
ರಾಜ್ಯ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಕೊರೊನಾಗೆ 59 ಮಂದಿ ಬಲಿಯಾಗಿದ್ದು, ಈವರೆಗೆ ಒಟ್ಟು 35,367 ಜನ ಸಾವನ್ನಪ್ಪಿದ್ದಾರೆ.
ಇಂದು 4775 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 27,73,407 ಜನ ಗುಣಮುಖರಾಗಿದ್ದಾರೆ. 44,846 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.02 ರಷ್ಟು ಇದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 352 ಜನರಿಗೆ ಸೋಂಕು ತಗುಲಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ.