ಬೆಂಗಳೂರು, ಜು 10 (DaijiworldNews/PY): "ಜೆಡಿಎಸ್ ಪಕ್ಷದ ಮಾಜಿ ಶಾಸಕ ಮಧುಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗುವ ದಿನಾಂಕವನ್ನು ತಿಳಿಸಲಾಗುವುದು" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಧು ಬಂಗಾರಪ್ಪ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗುವುದು ಖಚಿತವಾಗಿದೆ. ಆದರೆ, ದಿನಾಂಕ ನಿಗದಿಯಾಗಿಲ್ಲ. ಕಾರ್ಯಕ್ರಮ ಹಾಗೂ ಅಧಿಕೃತ ಸೇರ್ಪಡೆ ಬಗ್ಗೆ ತೀರ್ಮಾನಿಸಬೇಕಿದ್ದು, ನಂತರ ಈ ಬಗ್ಗೆ ತಿಳಿಸಲಾಗುವುದು" ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಶುಕ್ರವಾರ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಹಾಗೂ ಮಧು ಬಂಗಾರಪ್ಪ ಅವರು ಭೇಟಿ ನೀಡಿದ್ದು, ಮಾತುಕತೆ ನಡಿಸಿದ್ದಾರೆ. ಈ ವೇಳೆ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.