ನವದೆಹಲಿ,ಜು.15 (DaijiworldNews/HR): ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, "ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಒಪ್ಪುತ್ತಿಲ್ಲ ಆದರೆ ರೈತರ ಬೇಡಿಕೆಗಳು ಈಡೇರುವವರೆಗೂ ರೈತರ ಪ್ರತಿಭಟನೆ ಮುಂದುವರಿಯುತ್ತದೆ" ಎಂದಿದ್ದಾರೆ.
ಇನ್ನು "ಪ್ರಜಾಪ್ರಭುತ್ವ ದೇಶದಲ್ಲಿ, ಸರ್ಕಾರವು ರೈತರ ಜೊತೆಗೆ ನಿಲ್ಲುತ್ತಿಲ್ಲ. ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ" ಎಂದು ಹೇಳಿದ್ದಾರೆ.