ಮಹಾರಾಷ್ಟ್ರ, ಜು 18 (DaijiworldNews/PY): ಮುಂಬೈನಲ್ಲಿ ಶನಿವಾರ ತಡರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಚೆಂಬೂರಿನ ಭಾರತ್ ನಗರ ಪ್ರದೇಶದಲ್ಲಿ ಮನೆಯ ಗೋಡೆ ಕುಸಿದು 11 ಮಂದಿ ಸಾವನ್ನಪ್ಪಿದ್ದಾರೆ.

ಅವಶೇಷಗಳ ಅಡಿಯಲ್ಲಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಎನ್ಡಿಆರ್ಎಫ್ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಐದು ಗುಡಿಸಲುಗಳ ಮೇಲೆ ಗೋಡೆ ಕುಸಿದು ಬಿದ್ದಿದೆ. ಸುಮಾರು 8ಕ್ಕೂ ಅಧಿಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಭಾರೀ ಮಳೆಯ ಪರಿಣಾಮ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹಲವು ಕಡೆ ಭೂಕುಸಿ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.