ನವದೆಹಲಿ, ಜು.22 (DaijiworldNews/HR): ಕೇಂದ್ರ ಸರ್ಕಾರ ತೆಗೆದುಕೊಂಡ ತಪ್ಪು ನಿರ್ಧಾರಗಳಿಂದಲೇ 50 ಲಕ್ಷ ಭಾರತೀಯರು ಬಲಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಜೂನ್ 2021ರವರೆಗೆ ಮರಣ ಪ್ರಮಾಣವನ್ನು ಅಂದಾಜು ಮಾಡಿರುವ ಜಾಗತಿಕ ಅಭಿವೃದ್ಧಿ ಕೇಂದ್ರದ ಹೊಸ ಅಧ್ಯಯನವನ್ನು ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ರಾಹುಲ್, "ಕೇಂದ್ರ ಸರ್ಕಾರವು ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತೆಗೆದುಕೊಂಡಿರುವ ನಿರ್ಧಾರಗಳಿಂದಲೇ ಹೆಚ್ಚು ಸಾವು ಸಂಭವಿಸಿದ್ದು, ಕೊರೊನಾದ ಎರಡನೇ ಅಲೆಯಲ್ಲಿ 50 ಲಕ್ಷ ಮಂದಿ ಬಲಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು "ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯಲ್ಲಿ ಜೀವ ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡುವುದಕ್ಕೂ ನಿರಾಕರಿಸಿದ್ದು,ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿರುವವರ ಕಣ್ಣೀರಲ್ಲಿ ಎಲ್ಲವೂ ದಾಖಲಾಗಿದೆ" ಎಂದು ಹೇಳಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಭಾರತದಲ್ಲಿ ಕೊರೊನಾ ಸೋಂಕಿನಿಂದ ಸುಮಾರು 4.18 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.