ಶ್ರೀನಗರ, ಜು 30 (DaijiworldNews/PY): ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ಗ್ರೆನೇಡ್ ದಾಳಿ ಸಂಭವಿಸಿದ ಪರಿಣಾಮ ಇಬ್ಬರು ಸಿಆರ್ಪಿಎಫ್ ಯೋಧರು ಸೇರಿದಂತೆ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಪ್ರಾತಿನಿಧಿಕ ಚಿತ್ರ
"ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಶುಕ್ರವಾರ ಮಧ್ಯಾಹ್ನ ಬಾರಾಮುಲ್ಲಾ ಪಟ್ಟಣದ ಖಾನ್ಪೋರಾ ಸೇತುವೆಯ ಸಮೀಪ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ.
"ಉಗ್ರರ ಪತ್ತೆಗೆ ಇಡೀ ಪ್ರದೇಶವನ್ನು ಸುತ್ತುವರೆಯಲಾಗಿದೆ" ಎಂದು ಅಧಿಕಾರಿಗಳು ಹೇಳಿದ್ದಾರೆ.