ಚೆನ್ನೈ, ಆ 10 (DaijiworldNews/PY): ಸಿನಿಮಾ ಶೂಟಿಂಗ್ ಸಂದರ್ಭ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಕೈಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಹೈದರಾವಾದ್ ಆಸ್ಪತ್ರೆಗೆ ತೆರಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಶೂಟಿಂಗ್ ಸಂದರ್ಭ ಸಣ್ಣ ಪೆಟ್ಟಾಗಿದ್ದು, ಶಸ್ತ್ರ ಚಿಕಿತ್ಸೆಗಾಗಿ ನನ್ನ ಸ್ನೇಹಿತ, ಡಾ. ಗುರುವರೆಡ್ಡಿ ಬಳಿ ತೆರಳುತ್ತಿದ್ದೇನೆ. ನಾನು ಚೆನ್ನಾಗಿದ್ದೇನೆ, ಯಾರೂ ಚಿಂತಿಸಬೇಡಿ" ಎಂದು ತಿಳಿಸಿದ್ದಾರೆ.
ಚೆನ್ನೈನಲ್ಲಿ ತಮಿಳು ಸೂಪರ್ ಸ್ಟಾರ್ ಧನುಷ್ ನಟನೆಯ ಚಿತ್ರದಲ್ಲಿ ಪ್ರಕಾಶ್ ರಾಜ್ ಅವರು ಭಾಗಿಯಾಗಿದ್ದು, ಚಿತ್ರವೊಂದರ ಸಾಹಸ ದೃಶ್ಯ ಶೂಟಿಂಗ್ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.