ನವದೆಹಲಿ, ಆ.16 (DaijiworldNews/HR): ಒಬ್ಬ ಪುರುಷ ಮತ್ತು ಮಹಿಳೆ ಇಬ್ಬರೂ ಸುಪ್ರೀಂ ಕೋರ್ಟ್ನ ಹೊರಗೆ ಸೋಮವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂಧರ್ಭಿಕ ಚಿತ್ರ
ಆತ್ಮಹತ್ಯೆ ಇಬ್ಬರೂ ನಿರ್ಧಾರ ಮಾಡಿರುವ ಹಿಂದಿನ ಕಾರಣ ತಕ್ಷಣವೇ ತಿಳಿದಿಲ್ಲ. ಆದರೆ ಪ್ರಾಥಮಿಕ ತನಿಖೆಯಲ್ಲಿ ಪುರುಷ ಮತ್ತು ಮಹಿಳೆ ಬೆಂಕಿ ಹಚ್ಚಿಕೊಳ್ಳುವ ಮುನ್ನ ತಮ್ಮ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ನವದೆಹಲಿಯ ಉಪ ಪೊಲೀಸ್ ಆಯುಕ್ತ ದೀಪಕ್ ಯಾದವ್ ಹಾಗೂ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ತಂಡ, ಪುರುಷ ಮತ್ತು ಮಹಿಳೆಯನ್ನು ರಕ್ಷಿಸಿದೆ.
ಪೊಲೀಸ್ ತಂಡ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು ಮತ್ತು ತಕ್ಷಣವೇ ಸಂತ್ರಸ್ತರನ್ನು ಚಿಕಿತ್ಸೆಗಾಗಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದವರ ವಿಚಾರಣೆ ನಡೆಯುತ್ತಿದೆ.