ಜಮ್ಮು, ಆ.19 (DaijiworldNews/HR): ಭಯೋತ್ಪಾದಕರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ ಹತರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಸಾಂಧರ್ಭಿಕ ಚಿತ್ರ
ಥನಾಮಂಡಿ ಬೆಲ್ಟ್ʼನಲ್ಲಿ ಭಯೋತ್ಪಾದಕರು ಇರುವ ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಭಯೋತ್ಪಾದಕರು ಪಡೆಗಳ ಮೇಲೆ ಗುಂಡು ಹಾರಿಸಿದ ಬಳಿಕ ಶೋಧ ಕಾರ್ಯಾಚರಣೆ ಎನ್ಕೌಂಟರ್ ಆಗಿ ಮಾರ್ಪಟ್ಟಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಎನ್ ಕೌಂಟರ್ ನಲ್ಲಿ ರಾಷ್ಟ್ರೀಯ ರೈಫಲ್ಸ್ ನ ಜೆಸಿಒ ಒಬ್ಬರಿಗೆ ಗುಂಡು ತಗುಲಿದ್ದು, ಅವರನ್ನು ತಕ್ಷಣವೇ ಹತ್ತಿರದ ವೈದ್ಯಕೀಯ ಸೌಲಭ್ಯಕ್ಕೆ ಸ್ಥಳಾಂತರಿಸಿದರು ಸಾವನ್ನಪ್ಪಿದ್ದಾರೆ ಎಂದು ಜಮ್ಮುವಿನ ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ಹೇಳಿದ್ದಾರೆ.