ಚಿಕ್ಕಮಗಳೂರು, ಸ. 08 (DaijiworldNews/HR): ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಮೂತ್ರ ನೆಕ್ಕಿಸಿದ ಆರೋಪ ಪ್ರಕರಣದಲ್ಲಿ ಬಂಧಿತ ಆರೋಪಿ ಪಿಎಸ್ಐ ಅರ್ಜುನ್ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಚಿಕ್ಕಮಗಳೂರು 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಕಿರುಗುಂದ ಗ್ರಾಮದ ದಲಿತ ಯುವಕ ಪುನೀತ್ ಎಂಬುವರನ್ನು ಪೊಲೀಸ್ ಠಾಣೆಗೆ ವಿಚಾರಣೆ ನೆಪದಲ್ಲಿ ಕರೆಸಿಕೊಂಡು ಮೂತ್ರ ಕುಡಿಸಿದ ಪ್ರಕರಣದಲ್ಲಿ ಹುದ್ದೆಯಿಂದ ಅಮಾನತುಗೊಂಡಿದ್ದು, ಆರೋಪಿ ಪಿಎಸ್ಐ ಅರ್ಜುನ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ತಲೆಮರೆಸಿಕೊಂಡಿದ್ದರು.
ಇನ್ನು ಕರ್ನಾಟಕ ಹೈಕೋರ್ಟ್ಲ್ಲಿ ಜಾಮೀನು ವಜಾ ಆಗುತ್ತಿದ್ದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸರ ತಂಡ ಅರ್ಜುನ್ರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದು, ಬಳಿಕ ಸಿಐಡಿ ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಆರೋಪಿ ಅರ್ಜುನ್ ಮಂಗಳವಾರ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ.