ದೆಹಲಿ, ಸ.09 (DaijiworldNews/HR): ದೆಹಲಿಯ ಬವಾನದಲ್ಲಿರುವ ಕಾರ್ಖಾನೆಯೊಂದರಲ್ಲಿ ಗುರುವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಇನ್ನು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಇಲ್ಲಿಯವರೆಗೆ ಯಾವುದೇ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ವರದಿಯಾಗಿಲ್ಲ.