ಮುಂಬೈ, ಸ.17 (DaijiworldNews/HR): ಬಾಡಿಬಿಲ್ಡರ್, ಮಿಸ್ಟರ್ ಇಂಡಿಯಾ ಸ್ಪರ್ಧೆಯ ಮಾಜಿ ವಿಜೇತ ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಾಹಿಲ್ ಖಾನ್ ವಿರುದ್ಧ ಓಶಿವಾರಾ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ.

ಸಾಹಿಲ್ ಖಾನ್, ಮನೋಜ್ ಪಟೇಲ್ ಗೆ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮನೋಜ್ ಪಾಟೀಲ್ ಅವರ ಆರೋಗ್ಯ ಸುಧಾರಿಸಲು ನಾವು ಕಾಯುತ್ತಿದ್ದೇವೆ. ಅವರ ಪತ್ರವನ್ನು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ, ಆದರೆ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಆರೋಪಿಯು ಪಾಟೀಲ್ ರನ್ನು ಆತ್ಮಹತ್ಯೆಗೆ ಪ್ರಚೋದಿಸಿದ್ದಾನೆಯೇ ಎಂದು ಕಂಡುಹಿಡಿಯಲು ನಾವು ಪ್ರಕರಣದ ತನಿಖೆ ನಡೆಸುತ್ತೇವೆ. ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ಬಳಿಕ ನಾವು ಅವರ ವಿವರವಾದ ಹೇಳಿಕೆಯನ್ನು ದಾಖಲಿಸುತ್ತೇವೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇನ್ನು ಪಾಟೀಲ್ ಅವರು ಗುರುವಾರ ಓಶಿವಾರ ನಿವಾಸದಲ್ಲಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿ ಸಾಯಲು ಯತ್ನಿಸಿದ್ದರು ಮತ್ತು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಲಾಯಿತು.