ನವದೆಹಲಿ, ಸೆ. 19 (DaijiworldNews/SM): ಗ್ರಾಮೀಣಾಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ಹರಿಸಿ ರೈತರ ಆದಾಯ ಭದ್ರತೆ ಖಾತ್ರಿ ಪಡಿಸಬೇಕೆಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿಯೂ ರೈತರು ತಮ್ಮ ಕಾರ್ಯ ಮುಂದುವರಿಸಿದ್ದರು. ಗ್ರಾಮೀಣ ಆರ್ಥಿಕತೆಯ ಸುಧಾರಣೆ ಮತ್ತು ಗ್ರಾಮೀಣ ಸಮಾಜ ಸ್ವಾಸ್ಥ್ಯವಾಗಿರಬೇಕು ಎಂದು ಅವರು ಹೇಳಿದರು.
ಕೃಷಿಯನ್ನು ಆಧುನೀಕರಿಸುವ ಮತ್ತು ಅದನ್ನು ಹೆಚ್ಚು ಸಮರ್ಥನೀಯವಾಗಿಸಲು ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಯ ತಂತ್ರಗಳನ್ನು ಮರುಪರಿಶೀಲಿಸಬೇಕು ಮತ್ತು ನವೀಕರಿಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಲಹೆ ನೀಡಿದರು.