ವಿಜಯನಗರ, ಅ. 05 (DaijiworldNews/HR): ಕಲುಷಿತ ನೀರು ಸೇವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೆ ಪ್ರಾಣ ಉಳಿಸಿಕೊಳ್ಳುವುದಕ್ಕಾಗಿ ಗ್ರಾಮಸ್ಥರು ಊರು ತೊರೆದು ಹೊಗುತ್ತಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಕಲುಷಿತ ನೀರು ಸೇವನೆಯಿಂದ ವಾಂತಿಭೇದಿಯಿಂದ ಈಗಾಗಲೇ 6 ಜನರು ಮೃತಪಟ್ಟಿದ್ದು, ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಆತಂಕದ ಜನರು ಗ್ರಾಮವನ್ನು ತೊರೆದು ಸಂಬಂಧಿಕರ ಮನೆಗೆ ತೆರಳಿದ್ದು,ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.
ಇನ್ನು ಮಕರಬ್ಬಿ ಗ್ರಾಮದಲ್ಲಿ ಬೋರ್ ವೇಲ್ನಿಂದ ಹೊಸ ಪೈಪ್ ಲೈನ್ ಕಾಮಗಾರಿ ಅಳವಡಿಕೆ ನಡೆಯುತ್ತಿದ್ದ ವೇಳೆ ಹಳೆ ಪೈಪ್ ಗಳಿಗೆ ಡ್ಯಾಮೇಜ್ ಆಗಿ ಪೈಪ್ ನೊಳಗೆ ಚರಂಡಿ ನೀರು ವಿಶ್ರವಾಗಿದ್ದು, ಇದೇ ನೀರನ್ನು ಕುಡಿದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದು, 6 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.