ಶಿರಸಿ, ಅ.11 (DaijiworldNews/PY): "ಸಂಘಟನೆ ಹಾಗೂ ಪಕ್ಷದ ವರಿಷ್ಠರು ಒಪ್ಪಿದ್ದಲ್ಲಿ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವೆ" ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.

ಶಿರಸಿಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಗೆ ಶಿಕಾರಿಪುರದಿಂದ ಸ್ಪರ್ಧಿಸುತ್ತೀರಾ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
"ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ನಮ್ಮನ್ನು ಬಿಜೆಪಿ ಬೆಳೆಸಿದೆ. ನಮಗೆ ಪಕ್ಷ ಎಂದಿಗೂ ತಾಯಿಯಂತೆ. ಪಕ್ಷ ಯಡಿಯೂರಪ್ಪ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಹಾನಗಲ್ ಚುನಾವಣೆಲ್ಲಿ ಬಿಜೆಪಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ" ಎಂದಿದ್ದಾರೆ.
"ಬಿಎಸ್ವೈ ಅವರ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಇದು ರಾಜಕೀಯ ಷಡ್ಯಂತ್ರ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು" ಎಂದು ಹೇಳಿದ್ದಾರೆ.
"ಉಮೇಶ್ ಅವರು ಯಡಿಯೂರಪ್ಪ ಅವರ ಕಚೇರಿಯಲ್ಲಿ ಹಲವು ವರ್ಷ ಕೆಲಸ ಮಾಡಿದ್ದು ಸತ್ಯ. ತನಿಖೆ ಪಾರದರ್ಶಕವಾಗಿ ನಡೆಯಲಿದೆ. ಈ ಬಗ್ಗೆ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ" ಎಂದಿದ್ದಾರೆ.