ಬೆಂಗಳೂರು, ಅ.25 (DaijiworldNews/PY): ಬಿಜೆಪಿ ಸಚಿವರು ವಿಧಾನಸೌಧಕ್ಕೆ ಬೀಗ ಹಾಕಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿರುಗೇಟು ನೀಡಿದ್ದು, "ಜಮೀರ್ ಕಲ್ಪನೆ ವಿಪರೀತವಾಗಿದ್ದು, ಅದಕ್ಕೆ ಯಾವುದೇ ಆಧಾರವಿಲ್ಲ" ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, "ನಮ್ಮ ಸಚಿವರು ವಿಧಾನಸೌಧಕ್ಕೆ ಹೋಗಿ ಬಂದು ಮಾಡುತ್ತಾರೆ. ಎಲ್ಲಾ ಕೆಲಸಗಳು ಸರಿಯಾಗಿ ನಡೆಯುತ್ತಿವೆ. ನಾವು ಯಾವುದೇ ಕೆಲಸಗಳನ್ನು ನಿಲ್ಲಿಸಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿಲ್ಲ" ಎಂದಿದ್ದಾರೆ.
"ನಾವು ನಮ್ಮ ಪಕ್ಷದ ಸಂಘಟನೆಯನ್ನು ಮಾತ್ರವೇ ನೋಡುತ್ತೇವೆ. ಬದಲಾಗಿ, ಇನ್ನೊಂದು ಪಕ್ಷವನ್ನು ಮುಗಿಸುವ ಕಾರ್ಯವನ್ನು ಮಾಡುವುದಿಲ್ಲ. ಬಿಜೆಪಿಯಿಂದ ಹಣ ಹಂಚಿಕೆ ಮಾಡಲಾಗುತ್ತಿದೆ ಎನ್ನುವ ಕೈ ನಾಯಕರ ಆರೋಪ ಸತ್ಯಕ್ಕೆ ದೂರವಾದುದು. ಸೋಲಿನ ಭೀತಿಯಿಂದ ಕಾಂಗ್ರೆಸ್ ನಾಯಕರು ಈ ರೀತಿಯಾದ ಆರೋಪವನ್ನು ಮಾಡುತ್ತಿದ್ದಾರೆ" ಎಂದು ಹೇಳಿದ್ದಾರೆ.