ಮುಂಬೈ, ಅ.26 (DaijiworldNews/HR): ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಬುಧವಾರಕ್ಕೆ(ಅ.27ಕ್ಕೆ) ಮುಂದೂಡಿದೆ.

ಆರ್ಯನ್ ಖಾನ್ ಮತ್ತು ಇತರರು ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಇಂದು ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ವಿಚಾರಣೆಯನ್ನು ನಾಳೆಯೂ ಮುಂದುವರಿಸಲಿದ್ದು, ನಾಳೆ ಮಧ್ಯಾಹ್ನ 2:30ರಿಂದ ಮತ್ತೆ ವಿಚಾರಣೆ ನಡೆಯಲಿದೆ ಎಂದು ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಹೇಳಿದ್ದಾರೆ.
ಇನ್ನು ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಮನೀಶ್ ರಾಜಗರಿಯಾ ಮತ್ತು ಅವಿನ್ ಸಾಹು ಅವರಿಗೆ ನಗರದ ಎನ್ಡಿಪಿಎಸ್ ವಿಶೇಷ ನ್ಯಾಯಾಲಯವು ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಆರೋಪಿಗಳಿಗೆ ಜಾಮೀನು ದೊರೆತಿದೆ.