ಶ್ರೀನಗರ, ಅ.27 (DaijiworldNews/PY): ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಜಮಾತ್-ಎ-ಇಸ್ಲಾಮಿ ಸಂಘಟನೆಯ 10ಕ್ಕೂ ಅಧಿಕ ಸದಸ್ಯರ ಮನೆಗಳು ಹಾಗೂ ಅವರಿಗೆ ಸಂಬಂಧಿಸಿದ ಪ್ರದೇಶಗಳ ಮೇಲೆ ಬುಧವಾರ ದಾಳಿ ನಡೆಸಿದ್ದಾರೆ.

ಬಂಡೊಪೋರಾ, ಬುದ್ಗಾಂ ಹಾಗೂ ಇತರ ಜಿಲ್ಲೆಗಳಲ್ಲಿ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಅವರಿಗೆ ಸ್ಥಳೀಯ ಪೊಲೀಸರು ಸೇರಿದಂತೆ ಸಿಆರ್ಪಿಎಫ್ ಸಿಬ್ಬಂದಿಗಳು ನೆರವು ನೀಡಿದ್ದಾರೆ. ಭಯೋತ್ಪಾದನೆಗೆ ಹಣಕಾಸು ನೆರವು ನೀಡುತ್ತಿರುವ ವಿಷಯಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.
ಜಮಾತ್-ಎ-ಇಸ್ಲಾಮಿ ನಾಯಕರ ಮನೆ ಹಾಗೂ ಕಚೇರಿಗಳ ಮೇಲೆ ಎರಡು ತಿಂಗಳ ಹಿಂದೆ ಈ ರೀತಿಯಾದ ದಾಳಿ ನಡೆದಿತ್ತು ಎಂದು ಮೂಲಗಳು ತಿಳಿಸಿವೆ.
ದಾಳಿ ಹಾಗೂ ಶೋಧ ಕಾಯರ್ಯಾಚರಣೆಯ ಬಳಿಕ ಕೆಲವು ಮಂದಿಗೆ ಎನ್ಐಎಯ ದೆಹಲಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.