ನವದೆಹಲಿ, ಅ. 27 (DaijiworldNews/SM): ಪೆಗಾಸಸ್ ಬೇಹುಗಾರಿಕೆ ಪ್ರಕರಣದ ಕುರಿತಂತೆ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿರುವಾಗಲೇ ಸುಪ್ರೀಂಕೋರ್ಟ್ ತನಿಖೆಗಾಗಿ ಬುಧವಾರ ತಜ್ಞರ ಸಮಿತಿಯನ್ನು ರಚನೆ ಮಾಡಿದೆ.

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್ ವಿ ರವೀಂದ್ರನ್ ನೇತೃತ್ವದ ಸಮಿತಿಯನ್ನು ರಚಿಸಿ ತೀರ್ಪು ಪ್ರಕಟಿಸಿದೆ. ಈ ನಡುವೆ ಸುಪ್ರೀಂ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸಿದೆ. ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರ ಕಾಳೆಲೆದಿದ್ದಾರೆ.
"ಪೆಗಾಸಸ್ ಬೇಹುಗಾರಿಕೆ ಬಗ್ಗೆ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಆ ಮೂಲಕ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಪೆಗಾಸಸ್ ಬಹುಗಾರಿಕೆ ವಿಚಾರದಲ್ಲಿ ವಿರೋಧ ಪಕ್ಷಗಳ ನಿಲುವು ಸಮರ್ಥವಾಗಿದೆ ಎಂಬುವುದು ಸ್ಪಷ್ಟವಾಗಿದೆ," ರಾಹುಲ್ ಗಾಂಧಿ ಹೇಳಿದ್ದಾರೆ.