ಬೆಳಗಾವಿ, ಡಿ 20 (DaijiworldNews/MS): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವನಾತ್ಮಕ ಭಾಷಣದ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ , " ಎಂ ಬೊಮ್ಮಾಯಿ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಾದ ಹಿನ್ನೆಲೆಯಲ್ಲಿ ಭಾವುಕರಾಗಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ, ಸ್ಪಷ್ಟವಾಗಿ ಹೇಳಬೇಕೆಂದರೆ ಬೊಮ್ಮಾಯಿ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ, ಅವರ ನಾಯಕತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ" ಎಂದು ಹೇಳಿದರು.

ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಯಾವುದೇ ಗೊಂದಲಕ್ಕೆ ಎಡೆಯಿಲ್ಲ ಸಿಎಂ ವೈಯಕ್ತಿಕ ಭಾವನಾತ್ಮಕ ಹೇಳಿಕೆ ಇದು. ಇಡೀ ಸರ್ಕಾರ ಒಂದಾಗಿ ಕೆಲಸ ಮಾಡುತ್ತೆ.ರಾಜ್ಯದ ಬೆಳವಣಿಗೆಗೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ.ಯಾರು ಯಾರು ಏನೇನು ಹೇಳಿದ್ದಾರೋ ಅವರವರಿಗೆ ಬಿಟ್ಟಿದ್ದು" ಎಂದರು.
"ಬೆಳಗಾವಿಯಲ್ಲಿ ಭಾಷೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಭಾಷೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುವುದು ಸರಿಯಲ್ಲ. ಈ ವಿಚಾರವಾಗಿ ಯಾವುದೇ ಓಲೈಕೆ ರಾಜಕಾರಣ ಇಲ್ಲ. ಭಾಷೆ ಗಡಿ ಹೆಸರಿನಲ್ಲಿ ಪುಂಡಾಟಿಕೆಯನ್ನು ಸ್ಪಷ್ಟವಾಗಿ ಕಾನೂನು ಚೌಕಟ್ಟಿನಲ್ಲಿ ನಿಯಂತ್ರಣ ಮಾಡಲು ಸರ್ಕಾರ ಸಜ್ಜಾಗಿದೆ" ಎಂದು ಎಚ್ಚರಿಸಿದರು.