ಬೆಂಗಳೂರು, ಜ. 24 (DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕು ಅಲ್ಪ ಇಳಿಮುಖವಾಗಿದೆ. ಆರೋಗ್ಯ ಇಲಾಖೆಯ ವರದಿ ಪ್ರಕಾರ ಸೋಮವಾರದಂದು 46,426 ಸೋಂಕು ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಇಂದಿನ ವರದಿಯಿಂದ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 35,64,108ಕ್ಕೆ ಏರಿಕೆಯಾಗಿದೆ. ಕಳೆದ ಒಂದು ದಿನದಲ್ಲಿ 32 ಮಂದಿ ಕೊರೋನಾದಿಂದ ಸಾವಿಗೀಡಾಗಿದ್ದಾರೆ. ಈ ಸಾವಿನ ಮೂಲಕ ಒಟ್ಟು ಮೃತಪಟ್ಟವರ ಸಂಖ್ಯೆ 38,614ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಬೆಂಗಳೂರು ಒಂದರಲ್ಲೇ 21,569 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಇಂದು 41,703 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯಾದ್ಯಂತ ಒಟ್ಟು 3,62,487 ಸಕ್ರಿಯ ಪ್ರಕರಣಗಳಿವೆ.