ಮಂಡ್ಯ, ಮೇ 31 (DaijiworldNews/HR): ಪರಿಷತ್ ಹಾಗೂ ರಾಜ್ಯಸಭಾ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿಯಿಂದ ಯಾವುದೇ ಅಸಮಾಧಾನವಿಲ್ಲ, ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ ಎಲ್ಲರ ಸಹಮತ ಪಡೆದೆ ಕೋರ್ ಕಮಿಟಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿರುತ್ತದೆ ಎಂದರು.
ಇನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಅತೃಪ್ತರಿಂದ ಬಿಜೆಪಿಗೆ ವರದಾನವಾಗಲಿದೆ, ಜೆಡಿಎಸ್ನಲ್ಲಿ ಈಗಾಗಲೇ 6 ಅತೃಪ್ತರಿದ್ದಾರೆ, ಅವರೆಲ್ಲರೂ ಬಿಜೆಪಿ ಒಳ್ಳೆಯ ಪಾರ್ಟಿ ಅಂತಾ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.