ನವದೆಹಲಿ, ಜೂ 10 (DaijiworldNews/HR): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 7,584 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 24 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 7,584 ಮಂದಿಯಲ್ಲಿಕೊರೊನಾ ಸೋಂಕು ದೃಢಪಟ್ಟಿದ್ದು, ಈ ವರೆಗೆ ಒಟ್ಟು 5,24,747 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇನ್ನು ದೇಶದಲ್ಲಿ 36,267 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,791 ಜನರು ಕೋವಿಡ್ ನಿಂದ ಗುಣಮುಖರಾಗಿದ್ದು,ದೇಶದಲ್ಲಿ ಈವರೆಗೆ ಒಟ್ಟು 4,26,44,092 ಮಂದಿನ್ ಕೊರೊನಾದಿಂದ ಗುಣಮುಖರಾಗಿದ್ದಾರೆ.