ಪಶ್ಚಿಮ ಬಂಗಾಲ, ಫೆ 03(SM): ಪಶ್ಚಿಮ ಬಂಗಾಲದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ವಿರುದ್ಧ ಉತ್ತರಪ್ರದೇಶ ಮುಖ್ಯಮಂತ್ರಿ ಹರಿಹಾಯ್ದಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಡಳಿತಾವಧಿ ಕೊನೆಯಾಗಲು ದಿನಗಣನೆ ಆರಂಭವಾಗಿದೆ ಎಂದು ಯೋಗಿ ಆದಿತ್ಯನಾಥ್ ತೀವ್ರವಾಗಿ ಟೀಕಿಸಿದ್ದಾರೆ.
ಜನವರಿ 19ರಂದು ಟಿಎಂಸಿ ಆಯೋಜಿಸಿದ್ದ ಕೋಲ್ಕತ್ತಾ ಸಭೆಯಲ್ಲಿ ಭಾಗವಹಿಸಿದ್ದ ವಿಪಕ್ಷಗಳು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದಿದ್ದಾರೆ. ರಾಜ್ಯ ಸರಕಾರವು ಪ್ರಜಾಪ್ರಭುತ್ವ ಹಕ್ಕನ್ನು ಹೇಗೆ ಹತ್ತಿಕ್ಕುತ್ತಿದೆ ಎಂಬುವುದನ್ನು ಗಮನಿಸಬೇಕು ಎಂದು ಹೇಳಿದ್ದಾರೆ.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದಕ್ಷಿಣ ದಿನಜ್ ಪುರ್ ಜಿಲ್ಲೆಯ ಬಲಾರ್ ಘಾಟ್ ನಲ್ಲಿ ಗಣತಂತ್ರ ಬಚಾವೋ ಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದ ಬಳಿ ಹೆಲಿಕಾಪ್ಟರ್ ಇಳಿಸಲು ಅನುಮತಿ ನಿರಾಕರಿಸಿದ್ದರಿಂದ ಯೋಗಿ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.