ನವದೆಹಲಿ,ಫೆ 6 (MSP): ಎಲ್ಲಾ ವಯೋಮಾನದ ಮಹಿಳೆಯರಿಗೆ ಶಬರಿಮಲೆ ದೇವಾಲಯಕ್ಕೆ ಪ್ರವೇಶ ಸಂಬಂಧಿಸಿ ಮರುಪರಿಶೀಲನಾ ಅರ್ಜಿಯ ಬಗೆಗಿನ ತೀರ್ಪನ್ನು ಸುಪ್ರಿಂಕೋರ್ಟ್ ಕಾಯ್ದಿರಿಸಿದೆ. ಈ ನಡುವೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ತಾನು ಬದ್ಧ, ಮರುಪರಿಶೀಲನೆಯ ಅಗತ್ಯವಿಲ್ಲ ಎಂದು ಶಬರಿಮಲೆ ಅಯ್ಯಪ್ಪ ದೇಗುಲ ಆಡಳಿತ ಮಂಡಳಿ ಹೇಳಿ ತನ್ನ ಹಿಂದಿನ ನಿರ್ಧಾರದಿಂದ ಯೂಟರ್ನ್ ಹೊಡೆದಿದೆ.
ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ದೇವಾಲಯದ ಆಡಳಿತ ಮಂಡಳಿಯ ಈ ಹಿಂದೆ ವಾದಮಾಡಿತ್ತು. ಆದರೆ ಇದೀಗ ಯೂಟರ್ನ್ ಹೊಡೆದಿರುವ ದೇವಸ್ವಂ ಬೋರ್ಡ್ ಎಲ್ಲಾ ವಯೋಮತಿ ಮಹಿಳೆಯರ ಪ್ರವೇಶಕ್ಕೆ ಒಪ್ಪಿಗೆ ಸೂಚಿಸಿದೆ.
"ಕೆಲವು ನಿರ್ದಿಷ್ಟ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡದಿರುವುದು ಒಂದು ಅನಿವಾರ್ಯ ಧಾರ್ಮಿಕ ಆಚರಣೆಗೆ ಅಗತ್ಯ ಎಂದು ಅನ್ನಿಸುವುದಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.