ಹುಬ್ಬಳ್ಳಿ, ಫೆ 10(SM): ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ರವಿವಾರದಂದು ಹುಬ್ಬಳ್ಳಿಗೆ ಆಗಮಿಸಿದ್ದರು. ಆ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪ್ರಧಾನಿಯವರಿಂದ ಕರ್ನಾಟಕದಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಂತಾಗಿದೆ.
ಸಾಗರೋಪಾದಿಯಲ್ಲಿ ಹರಿದುಬಂದಿರುವ ಜನ ಸ್ತೋಮದ ಮುಂದೆ ಪ್ರಧಾನಿಯವರು ಕನ್ನಡದಲ್ಲೇ ಭಾಷಣ ಆರಂಭಿಸಿ ರಾಜ್ಯದ ಮಹನೀಯರನ್ನು ಸ್ಮರಿಸಿದರು. ಸ್ವಾತಂತ್ರ್ಯ ಕಹಳೆ ಮೊಳಗಿಸಿ, ಬ್ರಿಟಿಷರ ವಿರುದ್ಧ ಗುಡುಗಿದ್ದ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಕನಕದಾಸ, ಕುಮಾರವ್ಯಾಸ, ದ. ರಾ. ಬೇಂದ್ರೆ, ಗಂಗೂಬಾಯಿ ಹಾನಗಲ್, ಭೀಮ್ಸೇನ್ ಜೋಷಿ ಎಲ್ಲರಿಗೂ ನಮನ ಸಲ್ಲಿಸಿದರು.
ಶಿವೈಕ್ಯರಾದ ಶಿವಕುಮಾರ ಸ್ವಾಮೀಜಿ ಹಾಗೂ ದಿ.ಅನಂತ್ ಕುಮಾರ್ ಅವರ ಅನನ್ಯ ಸೇವೆಯನ್ನು ಪ್ರಧಾನಿ ಸ್ಮರಿಸಿದರು. ಹಾಗೂ ಶ್ರದ್ಧಾಂಜಲಿ ಸಲ್ಲಿಸಿದರು.
ಕೇಂದ್ರ ಸರ್ಕಾರ ರೈತರು, ಬಡವರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಎನ್ಡಿಎ ಸರ್ಕಾರ ರೈತರಿಗೆ, ಯುವಕರಿಗೆ ಉದ್ಯೋಗಕ್ಕೆ ಹೆಚ್ಚು ಒತ್ತು ನೀಡಿದೆ ಎಂದರು. ನಮ್ಮ ಸರ್ಕಾರ ಎಲ್ಲರಿಗೂ ಬೇಕಾದ ಅಗತ್ಯತೆಗಳನ್ನು ಪೂರೈಸುತ್ತಿದೆ ಎಂದು ಮೋದಿ ತಿಳಿಸಿದರು.