ಜಮ್ಮುಕಾಶ್ಮೀರ, ಫೆ 14(SM): ಪುಲ್ವಾಮಾದ ಸಿಆರ್ಪಿಎಫ್ ಯೋಧರ ಮೇಲಿನ ಆತ್ಮಾಹುತಿ ದಾಳಿ ನಡೆಸಿರುವ ಉಗ್ರರ ಪಾಪಿ ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಖಂಡಿಸಿದ್ದಾರೆ. ಯೋಧರ ಪ್ರಾಣ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಪುಲ್ವಾಮಾದಲ್ಲಿ ಸಿಆರ್ಪಿಎಫ್ ಯೋಧರ ಮೇಲಿನ ದಾಳಿ ಹೇಯ ಕೃತ್ಯವಾಗಿದೆ. ನಾನು ಈ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ವೀರ ಯೋಧರ ಪ್ರಾಣ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಇಡೀ ದೇಶವೇ ಹುತಾತ್ಮ ವೀರ ಯೋಧರ ಕುಟುಂಬದೊಂದಿಗೆ ಹೆಗಲಿಗೆ ಹೆಗಲು ನೀಡುತ್ತಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂಬುವುದಾಗಿ ಟ್ವಿಟ್ ಮಾಡಿದ್ದಾರೆ.
ಇನ್ನು ದಾಳಿ ನಡೆದ ಬಳಿಕ ಗೃಹ ಸಚಿವ ರಾಜ್ನಾಥ್ ಸಿಂಗ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿರೋದಾಗಿ ಪ್ರಧಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ.