ಪುಲ್ವಾಮಾ,ಫೆ 18 (MSP): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ೫೫ ಯೋಧರು ಹುತಾತ್ಮರಾದ ಬೆನ್ನಲ್ಲೇ ಮತ್ತೆ ಪುಲ್ವಾಮಾ ಜಿಲ್ಲೆಯ ಪಿಂಗ್ಲಾನ ಎಂಬಲ್ಲಿ ಉಗ್ರರು ಮತ್ತು ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಕಾರ್ಯಾಚರಣೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಈ ಪ್ರದೇಶದಲ್ಲಿ ಉಗ್ರರು ಅವಿತಿರುವ ಸುಳಿವನ್ನು ಅರಿತು , ಸೇನೆ ರಾತ್ರಿ ಶೋಧ ಕಾರ್ಯಾಚರಣೆ ನಡೆಸುವ ಸಂದರ್ಭ ಅವಿತಿದ್ದ ಉಗ್ರರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಲ್ಲಿ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿರುವುದಾಗಿ ವರದಿಯಾಗಿದೆ. ಅಧಿಕಾರಿ ಹಾಗೂ ಮೂವರು ಯೋಧರು ಭಾರತೀಯ ಸೇನೆಯ 55 ರಾಷ್ಟ್ರೀಯ ರೈಫಲ್ಸ್ ಪಡೆಯಲ್ಲಿ ಸೇವೆ ಸಲ್ಲಿಸುವವರಾಗಿದ್ದಾರೆ.
ಪುಲ್ವಾಮಾದ ಪಿಂಗ್ಲನ್ ಗ್ರಾಮದಲ್ಲಿ ಕಾಶ್ಮೀರದ ಪೊಲೀಸರು ಹಾಗೂ ಸೇನೆ ಜಂಟಿಯಾಗಿ ಕಾವಲು ಬೇಲಿ ರಚಿಸಿಮಾಡಿಕೊಂಡು ರಾತ್ರಿ ಪೂರ್ತಿ ಶೋಧಕಾರ್ಯಾಚರಣೆ ನಡೆಸಿದೆ. ಈ ಗ್ರಾಮದಲ್ಲಿ ಕನಿಷ್ಟ ಇಬ್ಬರು ಅಥವಾ ಮೂವರು ಭಯೋತ್ಪಾದಕರು ಅಡಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ಈ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದ್ದು, ಗುಂಡಿನ ಚಕಮಕಿ ನಿಂತಿದೆ.