ಹಾಸನ, ಫೆ 18(SM): ಪ್ರತಿಪಕ್ಷದವರನ್ನು ಕಾಲೆಳೆಯುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ವೇದಿಕೆಯನ್ನೇರಿ ಕೇವಲ ಭಾಷಣ ಮಾಡಿದರೆ ಸಾಲದು. ಬದಲಿಗೆ ಉಗ್ರರಿಗೆ ಸರಿಯಾದ ಪಾಠ ಕಲಿಸಬೇಕು. ಕೇವಲ ಘೋಷಣೆ ಕೂಗುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಸಿಎಂ ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಗೆ ಟಾಂಗ್ ನೀಡಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಭಾಷಣ-ಘೋಷಣೆ ಕೂಗಿದರೆ ಸಾಲದು, ಜೊತೆಗೆ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುವ ಬಗ್ಗೆ ಚಿಂತನೆ ಮಾಡಬೇಕು. ದೇಶದಲ್ಲಿ ದೇವೇಗೌಡರು ಪ್ರಧಾನಿಯಾಗಿದ್ದಾಗ ಪರಿಸ್ಥಿತಿ ಶಾಂತವಾಗಿತ್ತು.
ಆದ್ರೆ ಈಗ ಯಾಕೆ ಈ ರೀತಿ ರಕ್ತದೋಕುಳಿ ಹರಿಯುತ್ತಿದೆ? ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಅಂತ ಘೋಷಣೆ ಮಾಡಿದರೆ ಸಮಸ್ಯೆ ಪರಿಹಾರ ಆಗಲ್ಲ ಎಂದು ಪರೋಕ್ಷವಾಗಿ ಮೋದಿ ಮತ್ತು ಕೇಂದ್ರ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.