ನವದೆಹಲಿ, ಮಾ 10(SM): ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
ಏಪ್ರಿಲ್ 11ರಿಂದ ಮೇ 19ರ ತನಕ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 11ರಂದು ನಡೆಯಲಿದೆ. ಎರಡನೇ ಹಂತದ ಮತದಾನ 18ರಂದು ನಡೆಯಲಿದೆ. ಏಪ್ರಿಲ್ 23ಕ್ಕೆ ಮೂರನೇ ಹಂತ ಹಾಗೂ ಏಪ್ರಿಲ್ 29ರಂದು ನಾಲ್ಕನೇ ಹಂತದ ಮತದಾನ ನಡೆಯಲಿದೆ.
ಮೇ 6ರಂದು 5ನೇ ಹಂತದ ಚುನಾವಣೆ, ಮೇ 12ರಂದು 6ನೇ ಹಂತ ಹಾಗೂ ಮೇ 19ರಂದು ಕೊನೆಯ ಹಂತದ ಮತದಾನ ನಡೆಯಲಿದೆ.
ಕರ್ನಾಟಕದಲ್ಲಿ 2ನೇ ಹಂತದಲ್ಲಿ ಹಾಗೂ ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಂದರೆ ಏಪ್ರಿಲ್ 18ರಂದು ಹಾಗೂ 23ರಂದು ಕರ್ನಾಟಕದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 18ರಂದು 14 ಕ್ಷೇತ್ರ ಹಾಗೂ 23ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.