ಬೆಂಗಳೂರು,ಮಾ.11(AZM):ಕಾಂಗ್ರೆಸ್ ನ ಕೆಲವು ಹಾಲಿ ಸಂಸದರ ಕ್ಷೇತ್ರಗಳ ಮೇಲೆ ಮಿತ್ರ ಪಕ್ಷ ಜೆಡಿ ಎಸ್ ಕಣ್ಣು ಹಾಕಿರುವುದರಿಂದ ಸೋಮವಾರ ನಡೆದ ಸ್ಕ್ರೀನಿಂಗ್ ಕಮಿಟಿಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ.
ದಿನೇಶ್ ಗುಂಡೂರಾವ್, ಜಿ. ಪರಮೇಶ್ವರ್ ಮತ್ತು ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಗಂಟಗಟ್ಟಲೆ ಚರ್ಚೆ ನಡೆದಿದ್ದು, ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ.
ಈ ಹಿನ್ನಲೆ ಮಾರ್ಚ್ 16ರಂದು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.