ಕೋಲ್ಕತ್ತಾ,ಮಾ.12(AZM):ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಘೋಷಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಶೇ.40.5 ರಷ್ಟು ಮಹಿಳಾ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ ಎಂದು ಘೋಷಿಸಿದ್ದು, ಇದು ನಮಗೆ ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ.
ಅಲ್ಲದೆ ಟಿಎಂಸಿ ಈ ಬಾರಿ ಒಡಿಶಾ, ಅಸ್ಸಾಂ, ಜಾರ್ಖಂಡ್, ಬಿಹಾರ್ ಹಾಗೂ ಅಂಡಮಾನ್ನ ಲೋಕಸಭಾ ಕ್ಷೇತ್ರಗಳ ಪೈಕಿ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.