ಕಾಸರಗೋಡು, ಮಾ 12(SM): ಈ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 13ರ ಬುಧವಾರದಿಂದ ಆರಂಭಗೊಳ್ಳಲಿದ್ದು, ಮಾರ್ಚ್ ೨೭ರ ತನಕ ನಡೆಯಲಿದೆ.
ಕಾಸರಗೋಡು ಮತ್ತು ಕಾಞ೦ಗಾಡ್ ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 19, 156 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ 632 ವಿದ್ಯಾರ್ಥಿಗಳು ಕಡಿಮೆ ಇದ್ದಾರೆ.
ತನ್ ಬಿಹುಲ್ ಇಸ್ಲಾಂ ಹಯರ್ ಸೆಕಂಡರಿ ಶಾಲೆಯಲ್ಲಿ ಅತೀ ಹೆಚ್ಚು 794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಜಿ . ಎಚ್ ಎಸ್ ಎಸ್ ಮೂಡಂಬೈಲ್ ನಲ್ಲಿ ಕನಿಷ್ಠ 22 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇನ್ನು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಮ್ತೆ ನಿಗಾ ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಎಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ.